ಬೆಳ್ತಂಗಡಿ : ಸಮಾಜ ಪರಿವರ್ತನಾ ಚಳವಳಿಯ ನಾಯಕ, ಅಂಬೇಡ್ಕರ್‌ವಾದಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.
ಕಳೆದ ಜುಲೈ 6ರಂದು ಮನೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯ ತನ್ನ ಮನೆಯಲ್ಲಿ ಪಿ. ಡೀಕಯ್ಯ ಕುಸಿದು ಬಿದ್ದಿದ್ದರು. ತಲೆಗೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಅವರು ಮೃತಪಟ್ಟಿದ್ದರು.
ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜು. 9ರಂದು ಬೌದ್ಧ ಧರ್ಮದ ಪ್ರಕಾರ ಕಣಿಯೂರು ಗ್ರಾಮದ ಪದ್ಮುಂಜ ಬಳಿಯ ಪೊಯ್ಯದ ಮೂಲ ಮನೆಗೆ ತಂದು ದಫನ ಮಾಡಲಾಗಿತ್ತು.
ಇಂದಿನಿಂದ ಬಿಜೆಪಿ ಜನಸಂಪರ್ಕ ಸಭೆ ಪುನರಾರಂಭ.. ಉಡುಪಿಯಲ್ಲೂ ಜನ ಸಂಕಲ್ಪ ಯಾತ್ರೆ – Vishwanews24
ಆದರೆ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ತಾಯಿಯ ಕುಟುಂಬಸ್ಥರ ಪರವಾಗಿ ಡೀಕಯ್ಯ ಅವರ ಸಹೋದರಿಯ ಗಂಡ ಪದ್ಮನಾಭ ಎಂಬವರು ಜು.15 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.ಹೀಗಾಗಿ ಜು. 18ರಂದು ತಹಶೀಲ್ದಾರ್ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ವೈದ್ಯರಿಂದ ಶವ ಪರೀಕ್ಷೆ ಮಾಡಲಾಗಿತ್ತು.
ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು. ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು. ಇದೀಗ ನ. 4ರಂದು ಘಟನೆಯ ಬಗ್ಗೆ ರಾಜ್ಯ ಸರಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ.
ಶಿವಮೊಗ್ಗ: ಬೈಕ್-ಕಾರು ಮುಖಾಮುಖಿ ಢಿಕ್ಕಿ : ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…