ಬೆಳ್ತಂಗಡಿ : ದಿಡುಪೆಯ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ನಂತರ ಬೆಳ್ತಂಗಡಿ ಪೊಲೀಸರು ಐವರನ್ನು ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವ ಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಹೋಗಿದ್ದು, ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬರವು ವೇಳೆ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.
ಇದನ್ನೂ ಓದಿ:
ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…