ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಯುತ್ತಿದೆ.
ವಿಚಾರಣೆಗೆ ಪದೇ ಪದೇ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದೀಗ ಅವರ ವಿರುದ್ಧ ಮತ್ತೆ ವಾರೆಂಟ್ ಜಾರಿಯಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…