Featured

ಬೆಳ್ತಂಗಡಿ:  ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ – VIshwanews24

ಬೆಳ್ತಂಗಡಿ:  ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ಬೆಳ್ತಂಗಡಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು.

ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ, ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ ಕಾರ್ಯಕ್ರಮವನ್ನು ರಾಜ್ಯಪಾಲರು ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.‌ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಡಾ.ಹೇಮಾವತಿ ವೀ. ಹೆಗ್ಗಡೆ, ಡಿ‌. ಹರ್ಷೇಂದ್ರ ಕುಮಾರ್, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ, ಗ್ರಾ.ಯೋ. ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್, ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯಿಸ್ ಉಪಸ್ಥಿತರಿದ್ದರು.

ಮದ್ಯಮುಕ್ತರಾದ ಮಂಜುನಾಥ ತೀರ್ಥಹಳ್ಳಿ ಅನಿಸಿಕೆ ವ್ಯಕ್ತಪಡಿಸಿದರು. ಮದ್ಯ ವ್ಯಸನಮುಕ್ತರಾದ ಸಾಂಕೇತಿಕವಾಗಿ 5 ಮಂದಿಗೆ ಗುರುತಿನ ಚೀಟಿ ವಿತರಿಸಲಾಯಿತು. ನವಜೀವನ ಸಮಿತಿ ಸದಸ್ಯರ ಮಕ್ಕಳಿಗಾಗಿ ಡಾ.ವಿರೂಪಾಕ್ಷ ದೇವರಮನೆ ಬರೆದಿರುವ ‘ನಿನಗೆ ನೀನೇ ಗೆಳೆಯ’ ಪುಸ್ತಕವನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು. ಡಾ. ಥೋಮಸ್ ಸ್ಕರಿಯಾ ಅವರಿಗೆ ಜನಜಾಗೃತಿ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ವ್ಯಸನ ಮುಕ್ತ ಸಾಧಕರನ್ನು ಸಮ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಜ್ಯದ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಮದ್ಯವರ್ಜಿತ ನವಜೀವನ ಸಮಿತಿ ಸದಸ್ಯರು ಭಾಗಿಯಾಗಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago