ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ – vishwanews24
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ
ಬೆಳ್ತಂಗಡಿ: ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್ ಪಿ.ಆರ್. (57) ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ, ವಿಚಾರಣೆ ನಡೆಸಿ ಮತ್ತೇ ಕೇರಳ ಜೈಲಿಗೆ ಕಳುಹಿಸಲಾಗಿದೆ.
ರೂಪೇಶ್ ಪಿ.ಆರ್ ನನ್ನು ಕೇರಳ ಜೈಲಿನಿಂದ ಜು.22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
2012ರ ಡಿಸೆಂಬರ್ 10ರ ಗುಂಡಿನ ದಾಳಿ ಪ್ರಕರಣ ನಡೆದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ನಡೆಸಿ ತನಿಖೆ ನಡೆಸಿದ್ದರು.
ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – vishwanews24
ಜುಲೈ 24 ರಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಭದ್ರತೆಯೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕೇರಳ ಜೈಲಿಗೆ ಕರೆದೊಯ್ಯಲಾಗಿದೆ.
