Featured

ಬೆಳ್ತಂಗಡಿ: ನಾದಿನಿಯೊಂದಿಗೆ ಪರಾರಿ ಪ್ರಕರಣ – ಇಬ್ಬರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು -Vishwanews24

ಬೆಳ್ತಂಗಡಿ: ನಾದಿನಿಯೊಂದಿಗೆ ಪರಾರಿ ಪ್ರಕರಣ – ಇಬ್ಬರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು -Vishwanews24

 

ಬೆಳ್ತಂಗಡಿ, : ಪತ್ನಿಯನ್ನು ತವರಿನಲ್ಲಿ ಬಿಟ್ಟು ಅಲ್ಲಿಂದ ನಾದಿನಿ ಜೊತೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿವರ :

ದೂರದಾರರಾಗಿದ್ದ ಮಹಮ್ಮದ್‌ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಾಳ ಜೊತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ, ಫೋನ್ ಮುಖಾಂತರ ಸಂಭಾಷಣೆ ನಡೆಸುತ್ತಿದ್ದರು .

ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತನ್ನ ತವರು ಮನೆಯಲ್ಲಿದ್ದು, ಜುಲೈ 8ರಂದು ಬೆಳಗ್ಗೆ ಮುಸ್ತಾಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಈ ವೇಳೆ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರಿನಲ್ಲಿ ಹೋಗಿದ್ದಳು.

ತನ್ನ ಕಿರಿಯ ಪುತ್ರಿ ಹಿರಿಯ ಪುತ್ರಿಯ ಗಂಡನೊಂದಿಗೆ ತೆರಳಿದ್ದು ಈವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ತಂದೆ ಮಹಮ್ಮದ್‌‌ ದೂರಿನಲ್ಲಿ ತಿಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ . ಶೋಧ ಕಾರ್ಯವನ್ನು ಕೈಗೆತ್ತಿಕೊಂಡ ಪೊಲೀಸರು ಇಬ್ಬರನ್ನೂ ಕೊಡಗಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು, ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ವೇಳೆ ರೈಹಾನಾ ತನ್ನ ತಾಯಿ ಮನೆಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಮಂಗಳೂರು ರಿಮಾಂಡ್ ಹೋಂ ಗೆ ಕಳುಹಿಸಲು ನ್ಯಾಯಾಲಯ ಆದೇಶ ನೀಡಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago