Featured

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ

ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್‌ ಅವರ ಆರೋಗ್ಯ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಆರಂಭಿಸಿದ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನಾವೂರು ನಿವಾಸಿ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಅ.14 ರಂದು ಸಂಜೆ ಬಂಧಿಸಿದ ಬೆಳ್ತಂಗಡಿ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿ ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ಪುತ್ತೂರಿನ ಕೌಡಿಚಾರು ಎಂಬಲ್ಲಿದ್ದ ದಿನೇಶ್ ಪ್ರಭು ನಾವೂರು ಎಂಬವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :

ಅ.7ರಂದು ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಡಾ। ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ತಡ ರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು ಕೃತ್ಯ ನಡೆದ ಒಂದು ವಾರದಲ್ಲಿ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಲಭ್ಯ ಮಾಹಿತಿಯಂತೆ ಪ್ರಕರಣದ ಪ್ರಮುಖ ಆರೋಪಿ ರವಿ ಪೂಜಾರಿ ಎನ್ನಲಾಗಿದೆ. ಈತ ಈ ಕೃತ್ಯವನ್ನು ಮಾಡಲು ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ಎಂಬವರು ಸಂಚು ನಡೆಸಿ ಆತನ ಮೂಲಕ ಬೆಂಕಿ ಹಚ್ಚುವಂತೆ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಬಂಧಿತ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ನಿರೀಕ್ಷೆಯಿದೆ‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್‌ಪಿ ರೋಹಿಣಿ, ಬೆಳ್ತಂಗಡಿ ಠಾಣಾ ಪೊಲೀಸರು, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಡಿವೈಎಸ್‌ಪಿ ರೋಹಿಣಿ ಸಿ.ಕೆ.ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಉಪ ನೀರಿಕ್ಷಕರಾದ ಆನಂದ್ ಹಾಗೂ ಸಿಖಂದರ್ ಪಾಷಾ ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

30 minutes ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

49 minutes ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 hour ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 hour ago

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…

1 hour ago