ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ಆ.9ರ ಸೋಮವಾರ ನಡೆದಿದೆ.
ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು.
ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು, ಅರಣ್ಯ ಇಲಾಖೆ ಸಿಬಂದಿ ಜಮಾಯಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಮನೆ ತೆರವಿಗೆ ಅರಣ್ಯ ಇಲಾಖೆ ದಿಬಂದಿ ಮುಂದಾಗಿದ್ದಾರೆ. ಇದನ್ನು ತಡೆದ ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಅವರನ್ನು ಲೆಕ್ಕಿಸದೆ ಎಸಿಎಫ್ ಸುಬ್ಬಯ್ಯ ನಾಯ್ಕ್ ಹಾಗೂ ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ್ ತಳ್ಳಾಡ ನಡೆಸಿದರಲ್ಲದೆ ಹಲ್ಲೆಗೆ ಮುಂದಾದ ಘಟನೆ ನಡೆಯಿತು.
ಕಳೆದ ಅ.6 ರಂದು ಅರಣ್ಯ ಇಲಾಖೆ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿತ್ತು. ಇದನ್ನು ಪ್ರಶ್ನಿಸಿದ ಶಾಸಕರ ವಿರುದ್ಧವೇ ಹಗೆ ಸಾಧನೆ ಮಾಡುತ್ತಿರುವ ಅರಣ್ಯ ಇಲಾಖೆ ಸಚಿವರ ಆದೇಶ ಇದೆ ಎಂದು ಸುಳ್ಳು ಹೇಳಿ ಇಂದು ತೆರವಿಗೆ ಮುಂದಾಗಿತ್ತು. ಇದಕ್ಕೂ ಮುನ್ನ ಮನೆ ಮಂದಿ ಹಾಗೂ ಸ್ಥಳೀಯರು ಸೇರಿ 10 ಮಂದಿ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಪ್ರಕರಣವು ರಾಜಕೀಯ ಬಣ್ಣ ಪಡೆಯುತ್ತಿದ್ದು, ಅರಣ್ಯಧಿಕಾರಿಗಳಿಗೆ ಮನೆ ತೆರವುಗೊಳಿಸುವಂತೆ ಒತ್ತಡವೂ ಹೇರುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಅರಣ್ಯಧಿಕಾರಿಗಳು ಬಡವರ ಮನೆ ತೆರವುಗೊಳಿಸಿಯೇ ಸಿದ್ಧ ಎಂದು ಹಟಕ್ಕೆ ಬಿದ್ದಿದೆ. ತೆರವುಗೊಳಿಸುವುದಾದರೆ ಅರಣ್ಯ ಮತ್ತು ಕಂದಾಯ ಜಂಟಿ ಸರ್ವೇ ನಡೆಸಿ ತೆರವುಗೊಳಿಸಿ ಎಂದು ಶಾಸಕರು ಆಗ್ರಹಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಕೆ.ಎಸ್.ಆರ್.ಪಿ.ಯ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…