ಬೆಳ್ತಂಗಡಿ: ನಿಷೇಧಿತ MDMA ಮಾದಕವಸ್ತು ಸಾಗಾಟ ; ಇಬ್ಬರ ಬಂಧನ – vishwanews24
ಬೆಳ್ತಂಗಡಿ: ನಿಷೇಧಿತ MDMA ಮಾದಕವಸ್ತು ಸಾಗಾಟ ; ಇಬ್ಬರ ಬಂಧನ
ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್(27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್(22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ – vishwanews24
ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮೇ 27ರಂದು ಕಂಬಳದಡ್ಡ ಬಳಿ ಗುರುವಾಯನಕೆರೆ–ಮೂಡಬಿದಿರೆ ರಸ್ತೆಯಲ್ಲಿ ನಾಖಾಬಂದಿ ಹಾಕಿ ವಾಹನ ತಪಾಸಣೆ ನಡೆಸಲಾಯಿತು.
ಈ ವೇಳೆ KA-13-P-2905 ಸಂಖ್ಯೆಯ ಐ20 ಕಾರನ್ನು ತಡೆದು ಪರಿಶೀಲಿಸಿದಾಗ, ಮಾರಾಟಕ್ಕೆ ಸಾಗಿಸಲಾಗುತ್ತಿದ್ದ 4 ಗ್ರಾಂ MDMA ಮಾದಕವಸ್ತು ಪತ್ತೆಯಾಯಿತು. ಇದರ ಅಂದಾಜು ಮೌಲ್ಯ ಸುಮಾರು 40 ಸಾವಿರ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತ ಮಾರಾಟಕ್ಕಾಗಿ ಮಾದಕವಸ್ತು ನೀಡಿದ್ದಾನೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ – vishwanews24
ಬಂಧಿತ ಆರೋಪಿಗಳನ್ನು ಮೇ 28ರಂದು ಮಂಗಳೂರು ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿ ಹಂಝತ್ ಕರಾರ್ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
