ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ – vishwanews24
ಬೆಳ್ತಂಗಡಿ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ
ಬೆಳ್ತಂಗಡಿ : ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ.
ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ : ದೇಶದ ಅತಿ ಉದ್ದದ ಸಮುದ್ರ ಸೇತುವೆ ಇಂದು ಮೋದಿಯಿಂದ ಲೋಕಾರ್ಪಣೆ – vishwanews24
