Featured

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು ತೆರಳಿದ್ದ ವೇಳೆ, ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಈ ದುರ್ಘಟನೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯರು ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದರು.

ಕೊನೆಗೆ ರಾತ್ರಿ 9:30ರ ಸುಮಾರಿಗೆ ಯುವಕನ ಶವ ನದಿಯಲ್ಲಿ ಪತ್ತೆಯಾಗಿದ್ದು, ಹೊರತೆಗೆಯಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ (ಎಸ್‌ಐ) ಸಮರ್ಥ್ ಆರ್. ಗಾಣಿಗೇರ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

9 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago