ಬೆಳ್ತಂಗಡಿ : ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಸಿಎಂ ಎಚ್ಚರಿಕೆಯ ನಡುವೆಯೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದೀಗ ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ದುಷ್ಕರ್ಮಿಗಳ ತಂಡ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಹಲ್ಲೆಗೊಳಗಾದ ಚಾಲಕ, ಉಜಿರೆಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಬೆಂಗಳೂರಿಗೆ ತೆರಳು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…