Featured

ಬೆಳ್ತಂಗಡಿ  : ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು – vishwanews24

ಬೆಳ್ತಂಗಡಿ  : ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

ಮಂಗಳೂರು: ಪಟಾಕಿ ಗೋಡೌನ್  ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು  ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ  ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಅವಘಡ ಸಂಭವಿಸಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ.

ಇನ್ನು ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, ಪ್ರೇಮ್ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಕುಟ್ಟೋಡಿ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಕೆ ಮಾಡುತ್ತಿದ್ದು, ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಪಟಾಕಿ ಕಾರ್ಖಾನೆ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಈ ಘಟನೆ ಭಾನುವಾರ ಸಂಜೆ ಸುಮಾರು 5:30ರ ಸುಮಾರಿಗೆ ನಡೆದಿದೆ. 50 ಸೆನ್ಸ್ ಜಾಗದಲ್ಲಿ ಸಯ್ಯದ್ ಬಶೀರ್ ಎಂಬವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. 2011-2012 ನಲ್ಲಿ ತೆಗೆದುಕೊಂಡಿರುವ ಲೈಸೆನ್ಸ್ 2019ರಲ್ಲಿ ರಿನಿವಲ್ ಆಗಿದೆ. 2024ರ ಮಾರ್ಚ್ವರೆಗೂ ವ್ಯಾಲಿಡ್ ಆಗಿದೆ. ಡಿಮ್ಯಾಂಡ್‌ಗೆ ತಕ್ಕ ಹಾಗೆ ಪಟಾಕಿ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಬ್ಲಾಸ್ಟ್ ಆಗಿದೆ ಎಂಬುದು ಗೊತ್ತಾಗಿಲ್ಲ. ಮೊಬೈಲ್ ಫೊರೆನ್ಸಿಕ್ ಟೀಮ್, ಡಿಪಾರ್ಟ್ಮೆಂಟ್ ಆಫ್ ಎಕ್ಸ್‌ಪ್ಲೋಸಿವ್‌ ತಂಡ ಬಂದಿದೆ. ಘಟನೆ ಹೇಗಾಯಿತು? ಯಾಕಾಯ್ತು ಎಂಬ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತನಾಡಿದ ಅವರು, ಈ ಘಟನೆಗೆ ಕಾರಣ ಏನು ಎಂಬ ಬಗ್ಗೆ ಗಂಭೀರ ತನಿಖೆ ನಡೆಯಬೇಕಿದೆ. ಪರವಾನಿಗೆ ನೀಡಿದರ ಬಗ್ಗೆ ಸರ್ಕಾರ ಗಂಭೀರ ತನಿಖೆ ಮಾಡಬೇಕು. ಸ್ಫೋಟದ ತೀವ್ರತೆ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಈ ಪ್ರಕರಣವನ್ನು ರಾಷ್ಟೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಘಟನೆ ಬಹಳ ಭೀಕರವಾಗಿ ನಡೆದಿದೆ. ಈ ಘಟನೆ ಬಗ್ಗೆ ಅನುಮಾನವಿದೆ. ಮೂವರು ಬಲಿಯಾಗಿದ್ದಾರೆ. ದೊಡ್ಡದಾದ ಸ್ಫೋಟಕ ವಸ್ತುಗಳ ಸ್ಫೋಟವಾಗಿದೆ. ಸ್ಥಳೀಯ ಮನೆಗಳಿಗೆ ಸರ್ಕಾರ ಸಂಪೂರ್ಣ ಪರಿಹಾರ ಕೊಡಬೇಕು. ಬಲಿಯಾದ ಕಾರ್ಮಿಕ ಕುಟುಂಬಗಳಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದು, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿ ಸಮಗ್ರ ತನಿಖೆ ಮಾಡಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ತಕ್ಷಣವೇ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಈ ಸ್ಫೋಟದ ಹಿಂದೆ ಯಾವುದಾದ್ರು ವ್ಯವಸ್ಥೆಯ ನಂಟಿದೆಯಾ ಅನ್ನೋದನ್ನು ನೋಡಬೇಕು. ಈ ಸ್ಫೋಟಕ್ಕೆ ಸಂಬಂಧಪಟ್ಟವರನ್ನು ತಕ್ಷಣ ಬಂಧಿಸಿ ಎಂದು ಒತ್ತಾಯಿಸಿದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

8 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

9 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago