Featured

ಬೆಳ್ತಂಗಡಿ : ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ ; ಶೌಚಾಲಯದೊಳಗೆ ಮೃತದೇಹ ಪತ್ತೆ -Vishwanews24

ಬೆಳ್ತಂಗಡಿ: ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದು ಶೌಚಾಲಯದೊಳಗೆ ಮೃತದೇಹವನ್ನು ಹಾಕಿದ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಪತಿ ಮನೆಯಲ್ಲಿ ವಾಸವಿದ್ದ, ಮೂಲತಃ ಪುತ್ತೂರಿನ ನಿವಾಸಿ ತಸ್ಲಿಮಾ (23)ಕೊಲೆಯಾದ ಪತ್ನಿ. ತಸ್ಲಿಮಾಳ ಮೃತದೇಹ ಆಕೆಯ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದ್ದು, ಪತಿ ಉಮರ್ ಫಾರೂಕ್ ನಾಪತ್ತೆಯಾಗಿದ್ದಾನೆ. ಈಗಾಲೇ ಎರಡು ಮದುವೆಯಾಗಿರುವ ಉಮರ್ ಫಾರೂಕ್ ಕಳೆದ ವರ್ಷ ತಸ್ಲಿಮಾಳನ್ನು ಮೂರನೇ ಮದುವೆಯಾಗಿದ್ದಾನೆ.

ಮೃತ ಮಹಿಳೆ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಉಮರ್ ಫಾರೂಕ್ ಎಂಬರೊಂದಿಗೆ ವಿವಾಹವಾಗಿದರು. ಈ ಜೋಡಿಗೆ 4 ವರ್ಷದ ಗಂಡು ಮಗು ಮತ್ತು 2 ವರ್ಷದ ಹೆಣ್ಣು ಮಗು ಸೇರಿ ಇಬ್ಬರು ಮಕ್ಕಳಿದ್ದಾರೆ.

ಮಹಿಳೆಯ ಮೃತ ದೇಹ ಶೌಚಾಲಯದಲ್ಲಿ ಪತ್ತೆಯಾಗಿದೆ. ಪ್ರತಿ ದಿನ ರಾತ್ರಿ ಮನೆಯಲ್ಲಿ ಜಗಳವಾಗುತ್ತಿದ್ದು ನಿನ್ನೆಯು ಜಗಳವಾಗುತ್ತಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.

ಈತನ ವಿರುದ್ದ ಪುಂಜಾಲಕಟ್ಟೆ, ವೇಣೂರು ಸೇರಿದಂತೆ ಬೇರೆ ಜಿಲ್ಲೆಯ ಪೋಲೀಸ್ ಠಾಣೆಯಲ್ಲೂ ಕೂಡ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ ಹಾಗೂ ಬೆಳ್ತಂಗಡಿ ಎಸ್.ಐ ನಂದಕುಮಾರ್ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago