ಬೆಳ್ತಂಗಡಿ : ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಕೈಕಂಬ ಎಂಬಲ್ಲಿ ನಡೆದಿದೆ.
ಮಹಮ್ಮದ್ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಾಳ ಜೊತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ, ಫೋನ್ ಮುಖಾಂತರ ಸಂಭಾಷಣೆ ನಡೆಸುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತನ್ನ ತವರು ಮನೆಯಲ್ಲಿದ್ದರು. ಜುಲೈ 8ರಂದು ಬೆಳಗ್ಗೆ ಮುಸ್ತಾಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಈ ವೇಳೆ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರಿನಲ್ಲಿ ಹೋಗಿದ್ದಾಳೆ.
ತನ್ನ ಕಿರಿಯ ಪುತ್ರಿ ಈವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ತಂದೆ ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…