ಬೆಳ್ತಂಗಡಿ: ಪತ್ನಿ ಕೆರೆಯಲ್ಲಿ ಶವವಾಗಿ ಪತ್ತೆಯಾದ ಬೆನ್ನಲ್ಲೇ ಪತಿ ಆತ್ಮಹತ್ಯೆಗೆ ಶರಣು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಪತ್ನಿ ಕೆರೆಯಲ್ಲಿ ಶವವಾಗಿ ಪತ್ತೆಯಾದ ಬೆನ್ನಲ್ಲೇ ಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಪತ್ನಿಯ ಮೃತದೇಹ ತೋಟದ ಕೆರೆಯಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಆಕೆಯ ಪತಿಯೂ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸಂಭವಿಸಿದೆ.

ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆಗೆ ಶರಣಾದವರು.

ತನಿಯಪ್ಪ ಗೌಡ ಅವರು ಕಳೆದ ಎರಡು ಮೂರು ದಿನಗಳಿಂದ ಯಾರಿಗೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದರು. ಇದರಿಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೀವ್ರ ಶೋಧ ಕಾರ್ಯ ನಡೆಸಿದಾಗ, ಅವರು ತಮ್ಮ ನಿವಾಸದೊಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ – vishwanews24

ಕೆಲವೇ ದಿನಗಳ ಹಿಂದಷ್ಟೇ ಇವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಅಕಾಲಿಕ ಸಾವು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ಅವರು, ‘ಸಾವಿನ ಬಗ್ಗೆ ಅನುಮಾನವಿದೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ – vishwanews24

ಇದೀಗ ಪತಿ ತನಿಯಪ್ಪ ಗೌಡ ಅವರ ಮೃತದೇಹವೂ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದರಿಂದ, ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದಂಪತಿ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸಮಗ್ರ ತನಿಖೆ ಕೈಗೊಂಡಿದ್ದಾರೆ.

Leave a Reply