ಬೆಳ್ತಂಗಡಿ : ಪತ್ನಿಯ ಮೃತದೇಹ ತೋಟದ ಕೆರೆಯಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಆಕೆಯ ಪತಿಯೂ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸಂಭವಿಸಿದೆ.
ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆಗೆ ಶರಣಾದವರು.
ತನಿಯಪ್ಪ ಗೌಡ ಅವರು ಕಳೆದ ಎರಡು ಮೂರು ದಿನಗಳಿಂದ ಯಾರಿಗೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದರು. ಇದರಿಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೀವ್ರ ಶೋಧ ಕಾರ್ಯ ನಡೆಸಿದಾಗ, ಅವರು ತಮ್ಮ ನಿವಾಸದೊಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕೆಲವೇ ದಿನಗಳ ಹಿಂದಷ್ಟೇ ಇವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಅಕಾಲಿಕ ಸಾವು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ಅವರು, ‘ಸಾವಿನ ಬಗ್ಗೆ ಅನುಮಾನವಿದೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಪತಿ ತನಿಯಪ್ಪ ಗೌಡ ಅವರ ಮೃತದೇಹವೂ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದರಿಂದ, ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದಂಪತಿ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸಮಗ್ರ ತನಿಖೆ ಕೈಗೊಂಡಿದ್ದಾರೆ.
ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ…
ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ…
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…
7 ಮಂದಿಯ ಭೀಕರ ಹತ್ಯೆ : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್ ಕೇಸ್ ಬಗ್ಗೆ ಪೊಲೀಸ್ ಆಯುಕ್ತರ ಹೇಳಿಕೆ ಬೆಂಗಳೂರು:…
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…