ಬೆಳ್ತಂಗಡಿ : ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮತ ಎಣಿಕೆ ಕೇಂದ್ರದಲ್ಲಿ ಬುಧವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಕುವೆಟ್ಟು ಗ್ರಾಮ ನಿವಾಸಿಗಳಾದ ಮುಹಮ್ಮದ್ ಹರ್ಷದ್ (22), ದಾವೂದ್ (36) ಹಾಗೂ ಇಸಾಕ್ (28) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ನಡೆಯುತ್ತಿದ್ದ ಸಂದರ್ಭ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿ ಬಂದ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಈ ಕೃತ್ಯಕ್ಕೆ ವಿರೋಧವನ್ನೂ ವ್ಯಕ್ತಪಡಿಸಿದ್ದರು. ಘೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೋಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದರು.
ಎಸ್ ಡಿಪಿಐ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ವೃತ್ತನಿರೀಕ್ಷಕ ಪಿ.ಜಿ ಸಂದೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿತ್ತು, ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮೀಪ್ರಸಾದ್ ಸೂಚನೆ ಮೇರೆಗೆ ತನಿಖೆ ಕೈಗೊಳ್ಳಲಾಗಿದ್ದು, ವೈರಲ್ ಆಗಿರುವ ವಿಡಿಯೋ ಆಧರಿಸಿ ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದರು.
ಇದೀಗ ಈ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…