ಬೆಳ್ತಂಗಡಿ: ಉಜಿರೆಯಲ್ಲಿ ಗ್ರಾ.ಪಂ. ಮತಎಣಿಕೆ ಸಂದರ್ಭ ಎಸ್‌ಡಿಪಿಐ ಕಾರ್ಯಕರ್ತರ ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜ.7 ರಂದು ಸಂಜೆ 3 ಗಂಟೆಗೆ ಉಜಿರೆ ಬಸ್ ನಿಲ್ದಾಣದ ಸಮೀಪ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ ಹೇಳಿದರು.
ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಘಟನೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಪೊಲೀಸರಿಗೆ ದೂರು ನೀಡಿದ್ದು, ಇದರ ತನಿಖೆ ಪ್ರಗತಿಯ ಹಂತದಲ್ಲಿದೆ ಎಂದು ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ. ವಿಭಾಗದ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಸಹಿತ ರಾಜ್ಯ ಮತ್ತು ವಿಭಾಗದ ಪ್ರಮುಖರು ಭಾಗವಹಿಸಲಿದ್ದಾರೆ. ಸುಮಾರು ಒಂದು ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ವಿಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಜಿಲ್ಲಾಸಹ ಕಾರ್ಯದರ್ಶಿ ನವೀನ್ ನೆರಿಯ, ಭಜರಂಗದಳ ತಾಲೂಕು ಸಂಯೋಜಕ ಸಂತೋಷ್ ಕುಮಾರ್ ಅತ್ತಾಜೆ, ವಿಹಿಂಪ ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…