ಬೆಳ್ತಂಗಡಿ : ಉಜಿರೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರವಾಗಿ ಘೋಷಣೆ ಕೇಳಿ ಬಂದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ ಎಂದು ಹಿಂದೂ ಕಾರ್ಯಕರ್ತರೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.
ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಪ್ರಕರಣ ದಾಖಲಾದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂದರ್ಭ ಈ ಹಿಂದೂ ನಾಯಕನ ಪೋಟೋವೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈಗ ಈ ಯುವಕನು ತನ್ನ ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಎಸ್‌ಡಿಪಿಐ ಕಾರ್ಯಕರ್ತರು, ”ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದವರು ಹಿಂದೂ ಕಾರ್ಯಕರ್ತರು. ಈಗ ಅವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ.
ಉಜಿರೆ ಕಾಲೇಜಿನ ಎದುರುಗಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ‘ಪಾಕಿಸ್ತಾನ್ ಮುರ್ದಾಬಾದ್’ ಎಂಬ ಘೋಷಣೆ ಕೂಗುತ್ತಿರುವುದರೊಂದಿಗೆ ಅದೇ ಗುಂಪಿನ ಮಧ್ಯೆ ವ್ಯಕ್ತಿಯೋರ್ವ ‘ಪಾಕಿಸ್ತಾನ್ ಝಿಂದಾಬಾದ್’ ಎಂದು ಘೋಷಣೆ ಕೂಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕೇಳಿಸುತ್ತಿದೆ.
ಉಜಿರೆಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು. ಇದರ ವೀಡಿಯೊ ಹರಿದಾಡುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಸ್ತುತ ಎರಡೂ ದೂರುಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…