Featured

ಬೆಳ್ತಂಗಡಿ: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

ಬೆಳ್ತಂಗಡಿ: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಸಾವನ್ನಪ್ಪಿದ್ದ ಯುವತಿ.

ದಾಸ್ ಎಂಬವರ ಮಗಳು ಆದೀರಾ, ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದು ಅದಿರಾ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು.

ಇನ್ನು ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.

ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 minute ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago