Featured

ಬೆಳ್ತಂಗಡಿ : ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ತನಿಖೆಗೆ ಗೃಹ ಸಚಿವರಿಗೆ ಹರೀಶ್ ಪೂಂಜ ಮನವಿ – vishwanews24

ಬೆಳ್ತಂಗಡಿ : ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ತನಿಖೆಗೆ ಗೃಹ ಸಚಿವರಿಗೆ ಹರೀಶ್ ಪೂಂಜ ಮನವಿ

ಮಂಗಳೂರು; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮದ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಚರ್ಚೆ ಉಂಟಾಗಿದೆ. ಈ ಪ್ರಕರಣದ ಕುರಿತು ಸತ್ಯಾಸತ್ಯತೆ ಹೊರಬರಬೇಕೆಂಬ ಉದ್ದೇಶದಿಂದ, ಪ್ರಕರಣವನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಮಾನ್ಯ ಗೃಹ ಸಚಿವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಗ್ರಹಿಸಿದ್ಧಾರೆ.

ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪೊಲೀಸ್ ಇಲಾಖೆ ನಿರಪೇಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂಬ ನಿರೀಕ್ಷೆ ವ್ಯಕ್ತವಾಗಿದೆ‌. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರ ಮಾರ್ಗದರ್ಶನದ ಪೊಲೀಸರ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ‌.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago