ಬೆಳ್ತಂಗಡಿ: ಬಿ.ಎಮ್.ಎಸ್ ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶಿಸಿ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ(32) ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್(25) ಗಂಭೀರ ಗಾಯಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24
ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕಾಂಟ್ರಕ್ಟ್ ನೀಡಿದ್ದು ಅದರಂತೆ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಂಜೆ ಅಳವಡಿಸುತ್ತಿದ್ದರು. ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾನೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರಿಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವೈ.ಚಂದ್ರಚೂಡ್ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…