ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ ಮಾರ್ಗಗಳು ಜಾರುವಂತಾಗಿದ್ದು, ಇದರಿಂದ ಚಾರಣಿಗರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಹಾಗೂ ಚಾರಣ ಮಾರ್ಗಗಳ ಸುರಕ್ಷೆ ಪರಿಶೀಲಿಸಿದ ಬಳಿಕ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.
ಜೂ. 1ರಂದು ಚಾರಣ ಆರಂಭಗೊಂಡು, ಬಳಿಕ ಕೆಲವು ದಿನಗಳಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಆ ಬಳಿಕ ಮತ್ತೆ ಜೂ. 25ರಂದು ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಭಾರೀ ಮಳೆ ಹಿನ್ನೆಲೆ ಮತ್ತೆ ಜು. 8ರಿಂದ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]