ಬೆಳ್ತಂಗಡಿ : ಮುಂಜಾನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ಉದ್ಯಮಿಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ನಿವಾಸಿ ಉದ್ಯಮಿ ಪ್ರಜ್ವಲ್ ನಾಯಕ್(35) ಎಂದು ಗುರುತಿಸಲಾಗಿದೆ. ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ, ಉದ್ಯಮಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ. ಪ್ರಜ್ವಲ್ ಕೂಡಾ ಉದ್ಯಮಿಯಾಗಿದ್ದು, ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲಕರಾಗಿದ್ದರು.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬೆಂಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಬೀದಿ ದೀಪದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವೃತೆಗೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಅವರನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…