ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು.
ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿವಾಹಿತೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ಹೇಳಲಾಗಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…