Featured

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಅಪರಾಧ ಸಂಖ್ಯೆ 38/2026ರ ತನಿಖೆ ವೇಳೆ, ಮೇ 15ರಂದು ಬಂಟ್ವಾಳದ ಕೊಳ್ನಾಡು ಮೂಲದ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಆರೋಪಿ ಹಮೀದ್ ನೀಡಿದ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ @ ಜಾಬೀ (38), ಬಂಟ್ವಾಳದ ಕೊಳ್ನಾಡು ನಿವಾಸಿ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

ವಿಚಾರಣೆ ವೇಳೆ ಪುಂಜಾಲಕಟ್ಟೆ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು, ಜೊತೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 28/2025ರ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23,67,000 ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಈ ಎರಡು ಪ್ರಕರಣಗಳ ಹೊರತಾಗಿ ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇನ್ನೂ ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಉಪ್ಪಿನಂಗಡಿ ಗ್ರಾಮಾಂತರ ಸಿಪಿಐ ನಾಗರಾಜ್ ಹೆಚ್.ಇ., ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಸಹಕಾರ ನೀಡಿದ್ದಾರೆ.

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

6 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

6 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

7 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

8 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

11 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

11 hours ago