ಬೆಳ್ತಂಗಡಿ : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.
ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.
ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…