ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಂತ್ರಸ್ತ ಮಹಿಳೆ ನೀಡಿದ ದೂರಿನ ಪ್ರಕಾರ, 2023ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ, ಅವರ ಸಂಬಂಧಿಕನಾದ ಸುರೇಶ್ ಎಂಬಾತ ಮನೆಗೆ ಬಂದು ಅತ್ಯಾಚಾರ ಎಸಗಿದ್ದು, ಬಳಿಕ ವಿಷಯವನ್ನು ಬಹಿರಂಗಪಡಿಸಿದರೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಸಂತ್ರಸ್ತೆ ಜೂನ್ 7, 2026ರಂದು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026ರಡಿ ಭಾರತೀಯ ದಂಡ ಸಂಹಿತೆಯ ಕಲಂ 376 (ಅತ್ಯಾಚಾರ) ಹಾಗೂ 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಜೂನ್ 9ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಧರ್ಮಸ್ಥಳ ಪೊಲೀಸರು ಪ್ರಕರಣದ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…