ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ.
ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…