ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ.
ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೂ ಗಂಭೀರ ಗಾಯ ಮಾಡಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.
ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ, ಇದೇ ಸಂದರ್ಭ ನಾಯಿ ಪೂರ್ಣಿಮಾ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ತಲೆಯ ಚಿಪ್ಪು ಎದ್ದು ಬರುವಷ್ಟು ಗಂಭೀರ ಗಾಯಗಳಾಗಿದೆ . ಕೈ ಕಾಲಿಗೂ ಕಚ್ಚಿ ಗಂಭೀರ ಗಾಯಮಾಡಿದೆ. ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…