Featured

ಬೆಳ್ತಂಗಡಿ : ಮುಸ್ಲಿಮರ ಮತ ಬೇಡ ಎಂದಿದ್ದ ಶಾಸಕ ಹರೀಶ್‌ ಪೂಂಜಾ ಕಚೇರಿಗೆ ಮುಸ್ಲಿಮರ ಟೋಪಿ, ಶಾಲು ರವಾನೆ – Vishwanews24

ಮುಸ್ಲಿಮರ ಮತ ಬೇಡ ಎಂದಿದ್ದ ಶಾಸಕ ಹರೀಶ್‌ ಪೂಂಜಾ ಕಚೇರಿಗೆ ಮುಸ್ಲಿಮರ  ಟೋಪಿ, ಶಾಲು ರವಾನೆ

ಬೆಳ್ತಂಗಡಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ.

ಹರೀಶ್‌ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ ಕಮ್ಯುನಿಸ್ಟ್‌ ಪಕ್ಷ(ಎಂ) ಸಮಿತಿಯ ಸದಸ್ಯ ಶೇಖರ ಲಾಯಿಲ ಪ್ರತಿಭಟನಾ ಸೂಚಕವಾಗಿ ಪತ್ರದ ಜತೆ ಮುಸ್ಲಿಮರ ಪೇಟ ಮತ್ತು ಶಾಲನ್ನು ಶಾಸಕರ ಕಚೇರಿಗೆ ಕಳುಹಿಸಿದ್ದು, ಒಂದು ಕಡೆ ಮುಸ್ಲಿಮರ ಮತ ಬೇಡವೆಂದು ಸಾರ್ವಜನಿಕವಾಗಿ ಹೇಳುವುದು ಇನ್ನೊಂದು ಕಡೆ ಅದೇ ಸಮುದಾಯದವರ ಸಮಾವೇಶ ನಡೆಸಿ ಓಲೈಕೆ ಮಾಡುವ ನೀಚ ರಾಜಕೀಯ ಬುದ್ಧಿ ಬಿಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಒಂದು ಸಮುದಾಯವನ್ನು ಚುನಾವಣೆಗೆ ತಯಾರು ಮಾಡುವ ಉದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಧಾರ್ಮಿಕ ಸಭೆಯಲ್ಲಿ ನನಗೆ ಮುಸ್ಲಿಮರ ಮತ ಬೇಡ ಎಂದು ಹೇಳುವುದು ಒಬ್ಬ ಬದ್ಧತೆಯುಳ್ಲ ಶಾಸಕನಿಗೆ ಸೂಕ್ತವಲ್ಲ ಎಂದಿದ್ದಾರೆ.

ಇನ್ನು ಮುಸ್ಲಿಮರ ಮತ ಬೇಡವೆಂದ ಶಾಸಕನ ನೇತೃತ್ವದಲ್ಲಿ ಜೂನ್‌ 22ರಂದು ಬೆಳ್ತಂಗಡಿಯಲ್ಲಿ ‘ಅಲ್ಪಸಂಖ್ಯಾತರ ಸಮಾವೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವಂದ್ವ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಶೇಖರ್ ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago