ಬೆಳ್ತಂಗಡಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ.
ಹರೀಶ್ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ ಕಮ್ಯುನಿಸ್ಟ್ ಪಕ್ಷ(ಎಂ) ಸಮಿತಿಯ ಸದಸ್ಯ ಶೇಖರ ಲಾಯಿಲ ಪ್ರತಿಭಟನಾ ಸೂಚಕವಾಗಿ ಪತ್ರದ ಜತೆ ಮುಸ್ಲಿಮರ ಪೇಟ ಮತ್ತು ಶಾಲನ್ನು ಶಾಸಕರ ಕಚೇರಿಗೆ ಕಳುಹಿಸಿದ್ದು, ಒಂದು ಕಡೆ ಮುಸ್ಲಿಮರ ಮತ ಬೇಡವೆಂದು ಸಾರ್ವಜನಿಕವಾಗಿ ಹೇಳುವುದು ಇನ್ನೊಂದು ಕಡೆ ಅದೇ ಸಮುದಾಯದವರ ಸಮಾವೇಶ ನಡೆಸಿ ಓಲೈಕೆ ಮಾಡುವ ನೀಚ ರಾಜಕೀಯ ಬುದ್ಧಿ ಬಿಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಒಂದು ಸಮುದಾಯವನ್ನು ಚುನಾವಣೆಗೆ ತಯಾರು ಮಾಡುವ ಉದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಧಾರ್ಮಿಕ ಸಭೆಯಲ್ಲಿ ನನಗೆ ಮುಸ್ಲಿಮರ ಮತ ಬೇಡ ಎಂದು ಹೇಳುವುದು ಒಬ್ಬ ಬದ್ಧತೆಯುಳ್ಲ ಶಾಸಕನಿಗೆ ಸೂಕ್ತವಲ್ಲ ಎಂದಿದ್ದಾರೆ.
ಇನ್ನು ಮುಸ್ಲಿಮರ ಮತ ಬೇಡವೆಂದ ಶಾಸಕನ ನೇತೃತ್ವದಲ್ಲಿ ಜೂನ್ 22ರಂದು ಬೆಳ್ತಂಗಡಿಯಲ್ಲಿ ‘ಅಲ್ಪಸಂಖ್ಯಾತರ ಸಮಾವೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವಂದ್ವ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಶೇಖರ್ ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…