ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು.
ಸುಮಾರು 11 ಗಂಟೆ ಸಮಯಕ್ಕೆ ಚಿರತೆ ದನದ ಮೇಲೆ ದಾಳಿ ಮಾಡಿದೆ. ಮನೆಯವರು ತೋಟಕ್ಕೆ ಬಂದಾಗ ಚಿರತೆ ಮನೆಯವರನ್ನು ಅಟ್ಟಾಡಿಸಿದೆ.
ಚಿರತೆಯ ದಾಳಿಗೆ ದನ ಬಲಿಯಾಗಿದೆ. ಕೂಡಲೇ ಶೀನ ಪೂಜಾರಿಯವರು ಸ್ಥಳೀಯ ಪಂಚಾಯತ್ ಸದಸ್ಯ ಶುಭಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಲ್ಕೇರಿ ಪಂಚಾಯತ್ ಅಧ್ಯಕ್ಷ ನಾರಾಯಾಣ ಪೂಜಾರಿ, ಅಳದಂಗಡಿ ಉಪ ಅರಣ್ಯಧಿಕಾರಿ ಸುರೇಶ್ ಗೌಡ ಹಾಗೂ ಸ್ಥಳೀಯರು ಭೇಟಿ ನೀಡಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲ ಸಮಯದಿಂದ ಚಿರತೆ ನಾಯಿ, ದನ, ಕೋಳಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಹಾವಳಿಯಿಂದ ಈ ಭಾಗದ ಜನ ಭಯಬೀತರಾಗಿದ್ದಾರೆ.
ಈಗಾಗಲೇ ಬೋನ್ ಅಳವಡಿಸಲಾಗಿದೆ. ಪರಾರಿಯಾಗಿರುವ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…