ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ರಾಕೇಶ್ (21) ಬಂಧಿತ ಆರೋಪಿ.
ಪ್ರಸ್ತುತ ರಾಕೇಶ್ ಬೆಳ್ತಂಗಡಿಯ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್ (28) ನೊಂದಿಗೆ ಗಲಾಟೆ ಮಾಡಿಕೊಂಡು ಕೋಪದಲ್ಲಿ ಆತನ ಮೂಗು ಕಚ್ಚಿ ಗಾಯಮಾಡಿದ್ದ.
ಘಟನೆ ಬಳಿಕ ದೀಕ್ಷಿತ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ರಾಕೇಶ್ ವಿರುದ್ಧ ದೀಕ್ಷಿತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಜ. 2ರಂದು ಆರೋಪಿ ರಾಕೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…