ಬೆಳ್ತಂಗಡಿ: ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪದ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು.
ಮರ ಮಧ್ಯರಾತ್ರಿ ಉರುಳಿಬಿದ್ದಿದ್ದು , ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟ ಬರುವ ಮಾರ್ಗ ಮಧ್ಯೆ ರಸ್ತೆಗೆ ಬಿದ್ದ ಮರವನ್ನು ಗಮನಿಸದೆ ಬೈಕ್ ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…