ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನಪ್ಪಿದ ಘಟನೆ ಲಾಯಿಲದಲ್ಲಿ ನಡೆದಿದೆ.
ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆಯ ಹಿನ್ನೆಲೆಯಲ್ಲಿ ಲಾಯಿಲದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಅಂಗಡಿಗೆ ಹೋಗಿ ಲಾಯಿಲ ಜಂಕ್ಷನ್ ನಲ್ಲಿ ವಾಪಾಸ್ ರಸ್ತೆ ದಾಟುತ್ತಿದ್ದ ವೇಳೆ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…