ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ ಕರ್ನಾಟಕ ಸರ್ಕಾರ 10 ಕೋಟಿ ಅನುದಾನ ನೀಡಿದ್ದು, ಶಾಸಕ ಹರೀಶ್ ಪೂಂಜಾ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ, ಧಾರ್ಮಿಕ ದತ್ತಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆಯವರಿಗೆ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ರವರಿಗೆ ತಾಲೂಕಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ಸರಕಾರದ ಈ ಯೋಜನೆಯಿಂದ ಮೂಲಭೂತ ಸೌಕರ್ಯ ವೃದ್ಧಿಸಲು ನೆರವಾಗಲಿದೆ. ನಾರಾವಿಯ ಶ್ರೀ ಸೂರ್ಯ ನಾರಾಯಣ ದೇವಸ್ಥಾನ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ, ಕೊರಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು, ಶ್ರೀ ಗೋಪಾಕೃಷ್ಣ ದೇವಸ್ಥಾನ ನಾವೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಕಲ್ಮಂಜ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಹೊಸಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಹತ್ಯಡ್ಕ ಇದರ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.50.00 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಒಟ್ಟು ಹನ್ನೆರಡು ದೇಗುಲಗಳಿಗೆ ತಲಾ 50 ಲಕ್ಷ ಹಾಗೂ 16 ದೇಗುಲಗಳಿಗೆ ತಲಾ 25 ಲಕ್ಷ ಅನುದಾನ ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…