ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ.
ಈ ವೃದ್ಧೆಗೆ 5 ಮಕ್ಕಳಿದ್ದು, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯರಲ್ಲಿ ಒಬ್ಬರು ಗೃಹಿಣಿಯಾಗಿದ್ದು, ಮತ್ತೊಬ್ಬರು ಆಶಾ ಕಾರ್ಯಕರ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ವೃದ್ಧೆಯ ಮಕ್ಕಳ ಅಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವೃದ್ಧೆಯನ್ನು ಬಿಟ್ಟು ಹೋಗಿರುವ ಬಗ್ಗೆ ದ.ಕ ಜಿಲ್ಲಾ 112 ಸಹಾಯವಾಣಿಗೆ ಕರೆ ಬಂದಿದ್ದು, ತಕ್ಷಣ ತುರ್ತು ಸ್ಪಂದನ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಿಸಿದೆ. ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ವೃದ್ಧೆಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ. ಮನೆಯವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಬೆಳ್ತಂಗಡಿ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮನೆಯವರನ್ನು ಸಂಪರ್ಕಿಸಿದ್ದು, ಮಾಹಿತಿ ಪಡೆದು ಅವರ ಮೇಲೆ ಕ್ರಮ ಜರುಗಿಸುವ ಮಾಹಿತಿ ಲಭ್ಯವಾಗಿದೆ.
ವಿಧಾನಪರಿಷತ್ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…