ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…