ಬೆಳ್ತಂಗಡಿ :ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಮದ್ರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದ್ರಸಾ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾನ ಎಂದು ಗುರುತಿಸಲಾಗಿದೆ.
ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆರೋಪಿ ಮುಹಮ್ಮದ್ ಸೈಫುಲ್ಲಾನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ತನಿಖೆ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್.ಎಂ. ಅವರು ಆರೋಪಿ ಮುಹಮ್ಮದ್ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿ ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…