ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.
ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃತಪಟ್ಟಿದ್ದಾಳೆ.
ಮೆಸ್ಕಾಂ ಇಲಾಖೆ ನಿರ್ಲಕ್ಷ್ಯವೇ ಯುವತಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯವರು ಕಳೆದ ಕೆಲವು ಸಮಯಗಳಿಂದ ಅಪಾಯಕಾರಿ ವಿದ್ಯುತ್ ತಂತಿ ಹಾಗೂ ಕಂಬ ತೆರವುಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ನೀಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂತಹ ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಮನೆಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದಾರೆ. ಮೆಸ್ಕಾಂ ಇಲಾಖೆಯಿಂದ ಈಗಾಗಲೇ ರೂ 5 ಲಕ್ಷ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರೂ. 25 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…