Featured

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು – Vishwanews24

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ.

ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ. ಅವರನ್ನು ಅಲ್ಲಿದ್ದವರು ಆರೈಕೆ ಮಾಡಿ ಬಳಿಕ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಘಟನೆಗೆ ಬಗ್ಗೆ ಮೆಸ್ಕಾಂ ಇಲಾಖೆಯವರ ನಿರ್ಲಕ್ಷತನದಿಂದ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯ ಬಗ್ಗೆ ಯಾವುದೇ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಹಾಗೂ ಅಂಗಾರು ಮತ್ತು ಅವರ ಪತಿ ಸಗುಣರವರನ್ನು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯಿರುವ ಸ್ಥಳದಲ್ಲಿ ಕೆಲಸಕ್ಕೆ ನೇಮಿಸಿ ಕೆಲಸ ಮಾಡಿಸಿರುವ ಬಗ್ಗೆ ಜಯಂತ ಕುಮಾರ್‌ರವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago