Featured

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ‌ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.

ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago