ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕ ಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.
ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…