ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲು – Vishwanews24
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.
ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.
ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ : ದಿನೇಶ್ ಗುಂಡೂರಾವ್ – Vishwanews24
ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.
