ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ -vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಅಸಂವಿಧಾನಿಕ ಪದಗಳನ್ನು ಉಪಯೋಗಿಸಿ ಪೊಲೀಸರಿಗೆ ಬೆದರಿಕೆ ಹಾಕಿದ ಹಾಗೂ ತಾಲೂಕು ಕಚೇರಿಯ ಎದುರು ಅನುಮತಿಯಿಲ್ಲದೆ‌ ಪ್ರತಿಭಟನಾ ಸಭೆ‌ ನಡೆಸಿ ಪೊಲೀಸರ ಕಾಲರ್ ಪಟ್ಟಿ ಹಿಡಿಯುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಡಿಜೆ ಹಳ್ಳಿ ಕೆಜೆ ಹಳ್ಳಿ ಠಾಣೆಯ ಸ್ಥಿತಿ ಬೆಳ್ತಂಗಡಿ ಠಾಣೆಗೂ ಬರಲಿದೆ ಎಂದು ಬೆದರಿಕೆ ಹಾಕಿದ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.

Leave a Reply