ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಹಾಗೂ ಪ್ರಮುಖ ಸಾಕ್ಷಿಯಾಗಿರುವ ಹರೀಶ್ ಮುಗೇರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 2022ರ ಡಿಸೆಂಬರ್ 18ರಂದು ನಡೆದ ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್ ಬಿ. ಮುಗೇರ ಕಳೆದ (ಮಾ.11ರಂದು) ರಾತ್ರಿ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಅವರ ಜೊತೆಗೆ ಇದ್ದವರು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ :
ಶ್ರೀಧರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆಗಾಗಿ ನೋಟಿಸ್ ನೀಡಿ ಹರೀಶ್ ರನ್ನು ಕರೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಈ ಮಧ್ಯೆ ಹರೀಶ್ ಆತ್ಮಹತ್ಯೆಗೆ ಯತ್ನಿಸದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…