ಬೆಳ್ತಂಗಡಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ  ಅಪಘಾತ ;  ಬೈಕ್‌ ಸವಾರ ಸ್ಥಳದಲ್ಲೇ ಸಾವು – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ  ಅಪಘಾತ ;  ಬೈಕ್‌ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ.

ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25 ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24 

ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಬಂಟ್ವಾಳದಲ್ಲಿರುವ ಮನೆ ಕಡೆ ಇಬ್ಬರೂ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಕಾರಣವಾದ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವಿಜಯ್ ತಂದೆ ಈ ಹಿಂದೆಯೇ ನಿಧನರಾಗಿದ್ದು, ತಾಯಿ ಮತ್ತು ತಂಗಿಯೊಂದಿಗೆ ಬಂಟ್ವಾಳದಲ್ಲಿ ವಾಸವಾಗಿದ್ದರು. ಮನೆಗೆ ಆಧಾರ ಸ್ಥಂಭವಾಗಿದ್ದ ವಿಜಯ್‌ನನ್ನು ಕಳೆದುಕೊಂಡ ಕುಟುಂಬ ಇದೀಗ ಅಕ್ಷರಶಃ ಸಂಕಷ್ಟದಲ್ಲಿದೆ.

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24 

Leave a Reply