ಬೆಳ್ತಂಗಡಿ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್ ಸಮೀಪ ನಡೆದಿದೆ.
ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್ (25 ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಬಂಟ್ವಾಳದಲ್ಲಿರುವ ಮನೆ ಕಡೆ ಇಬ್ಬರೂ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಕಾರಣವಾದ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವಿಜಯ್ ತಂದೆ ಈ ಹಿಂದೆಯೇ ನಿಧನರಾಗಿದ್ದು, ತಾಯಿ ಮತ್ತು ತಂಗಿಯೊಂದಿಗೆ ಬಂಟ್ವಾಳದಲ್ಲಿ ವಾಸವಾಗಿದ್ದರು. ಮನೆಗೆ ಆಧಾರ ಸ್ಥಂಭವಾಗಿದ್ದ ವಿಜಯ್‌ನನ್ನು ಕಳೆದುಕೊಂಡ ಕುಟುಂಬ ಇದೀಗ ಅಕ್ಷರಶಃ ಸಂಕಷ್ಟದಲ್ಲಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…